March 10, 2026
Tuesday, March 10, 2026
spot_img

ದೇಶಾದ್ಯಂತ ಎಲ್​ಪಿಜಿ ಬಿಕ್ಕಟ್ಟು: ಐಪಿಎಲ್ ಆರಂಭಕ್ಕೂ ಹೊಡೆತ ಬೀಳುತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಎಲ್​ಪಿಜಿ ಬಿಕ್ಕಟ್ಟು ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಇದರ ನಡುವೆ ಐಪಿಎಲ್ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದ್ದು, ದೇಶದಲ್ಲಿ ಉಂಟಾಗಿರುವ ಎಲ್​ಪಿಜಿ ಪೂರೈಕೆಯಲ್ಲಿನ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಹೇಳಿದ್ದಾರೆ.

ಈ ಯುದ್ಧದಲ್ಲಿ ಪ್ರತಿದಿನ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ನಾವು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ಆದ್ದರಿಂದ ಈ ಸಮಯದಲ್ಲಿ ಖಚಿತವಾಗಿ ಏನನ್ನೂ ಹೇಳಲಾಗುವುದಿಲ್ಲ. ಐಪಿಎಲ್ 2026, ಮುಂದಿನ ಕೆಲವು ದಿನಗಳಲ್ಲಿ ಪ್ರಾರಂಭವಾಗಲಿದೆ. ಆ ಸಮಯದಲ್ಲಿ ಪರಿಸ್ಥಿತಿಯ ತೀವ್ರತೆಯನ್ನು ಆಧರಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

ಐಪಿಎಲ್ 2026 ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಆದಾಗ್ಯೂ, ಅದರ ವೇಳಾಪಟ್ಟಿಯನ್ನು ಇನ್ನೂ ಘೋಷಿಸಲಾಗಿಲ್ಲ. ಹಲವಾರು ರಾಜ್ಯಗಳಲ್ಲಿ ನಡೆಯಬೇಕಾಗಿರುವ ಚುನಾವಣೆಗಳಿಂದಾಗಿ ವೇಳಾಪಟ್ಟಿ ಪ್ರಕಟ ವಿಳಂಬವಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !