September 30, 2026
Wednesday, September 30, 2026
spot_img

ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು: ಪೆಟ್ರೋಲಿಯಂ, ವಿದೇಶಾಂಗ ಸಚಿವರ ಜೊತೆ ಪ್ರಧಾನಿ ಮೋದಿ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮದ್ಯ ಪ್ರಾಚ್ಯದಲ್ಲಿನ ಯುದ್ಧ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗುತ್ತಿದ್ದು, ಈಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಿದ್ದಾರೆ.

ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು ಅಗತ್ಯ ಸರಕುಗಳ ಕಾಯ್ದೆಯನ್ನು ಸಕ್ರಿಯಗೊಳಿಸಿದೆ. ಎಲ್​ಪಿಜಿ ಉತ್ಪಾದನೆ ಹೆಚ್ಚಿಸಲು ಹಾಗೂ ಹೈಡ್ರೋಕಾರ್ಬನ್​ಗಳನ್ನು ಎಲ್​ಪಿಜಿ ಸಂಗ್ರಹಕ್ಕೆ ಸೇರಿಸುವಂತೆ ದೇಶದಲ್ಲಿರುವ ರಿಫೈನರಿಗಳು ಹಾಗೂ ಪೆಟ್ರೋಕೆಮಿಕನ್ ಘಟಕಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.

ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದರಿಂದ ಈ ಬಿಕ್ಕಟ್ಟು ಉಂಟಾಗಿದೆ. ಈ ಸಮುದ್ರ ಮಾರ್ಗವು ಭಾರತದ ಇಂಧನ ಭದ್ರತೆಗೆ ಅತ್ಯಗತ್ಯವಾಗಿದೆ. ಏಕೆಂದರೆ ದೇಶವು ತನ್ನ ಒಟ್ಟು ಎಲ್‌ಪಿಜಿ ಅವಶ್ಯಕತೆಗಳಲ್ಲಿ ಶೇ. 62 ರಷ್ಟು ಆಮದು ಮಾಡಿಕೊಳ್ಳುತ್ತದೆ.

ಅದೇ ರೀತಿ ಸೌದಿ ಅರೇಬಿಯಾದಂತಹ ರಾಷ್ಟ್ರಗಳಿಂದ ಶೇ. 85 ರಿಂದ ಶೇ. 90 ರಷ್ಟು ಆಮದು ಆಗುವುದು ಈ ನಿರ್ಬಂಧಿತವಾಗಿರುವ ಜಲಸಂಧಿಯ ಮೂಲಕ. ಹೀಗಾಗಿ ಸರ್ಕಾರವು ಪ್ರಸ್ತುತ ಪರ್ಯಾಯ ಪೂರೈಕೆ ಮೂಲಗಳನ್ನು ಹುಡುಕುತ್ತಿದ್ದರೂ, ತಕ್ಷಣದ ಕೊರತೆಯು ಲಭ್ಯವಿರುವ ದಾಸ್ತಾನುಗಳಿಗೆ ಕಟ್ಟುನಿಟ್ಟಿನ ಆದ್ಯತೆಯನ್ನು ನೀಡುವಂತೆ ಮಾಡಿದೆ.

Must Read