ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ದೆಹಲಿಯ ಕ್ರಿಶನ್ ವಿಹಾರ್ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ರಜನಿ (24) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
“ಕ್ರಿಶನ್ ವಿಹಾರ್‌ನ ಆರ್‌ಡಿ ಪಬ್ಲಿಕ್ ಸ್ಕೂಲ್ ಬಳಿಯ ಕ್ಯೂ-ಬ್ಲಾಕ್‌ನಿಂದ ಸಿಲಿಂಡರ್ ಸ್ಫೋಟದ ಕರೆ ಬಂತು. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಎಲ್‌ಪಿಜಿ ಸಿಲಿಂಡರ್‌ನಲ್ಲಿ ಸ್ಫೋಟ ಸಂಭವಿಸಿದೆ” ಎಂದು ದೆಹಲಿ ಅಗ್ನಿಶಾಮಕ ಸೇವೆ ಹೇಳಿಕೆಯಲ್ಲಿ ತಿಳಿಸಿದೆ.
ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದಾಗಿ ಮನೆ ಅರ್ಧದಷ್ಟು ಕುಸಿದಿದೆ ಎಂದು ಹೇಳಿದ್ದಾರೆ.
ಇನ್ನೊಬ್ಬ ಮಹಿಳೆ ರೇಣು 18 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಆಂಬ್ಯುಲೆನ್ಸ್ ಮೂಲಕ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.