October 16, 2026
Friday, October 16, 2026
spot_img

ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ: ಈ ಕುರಿತು ಸಿಎಂ ಡಿ. ಕೆ. ಶಿವಕುಮಾರ್ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆ ಏರಿಕೆಯಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿ. ಕೆ. ಶಿವಕುಮಾರ್, ಅಧಿಕಾರಿಗಳಿಂದ ವರದಿ ಕೇಳಿರುವುದಾಗಿ ತಿಳಿಸಿದರು.

ಕೈಗಾರಿಕಾ ಅನಿಲ, ಕೈಗಾರಿಕಾ ದರ ಏರಿಕೆ

ಬೆಂಗಳೂರಿನಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, ಎಲ್ ಪಿಜಿ ದರಕ್ಕಿಂತ ಕೈಗಾರಿಕಾ ಅನಿಲ ಮತ್ತು ಕೈಗಾರಿಕಾ ಡೀಸೆಲ್ ದರಗಳು ಹೆಚ್ಚು ಪ್ರಮಾಣದಲ್ಲಿ ಏರಿಕೆ ಕಂಡಿದೆ. ಈ ಕುರಿತು ಅಧಿಕಾರಿಗಳು ವರದಿ ನೀಡಿದ ಬಳಿಕ ಮಾತನಾಡುತ್ತೇನೆ ಎಂದು ಹೇಳಿದರು.

ಈ ವರ್ಷದ ಮಾರ್ಚ್ 7ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 60 ರೂಪಾಯಿ ಹೆಚ್ಚಿಸಲಾಗಿತ್ತು. ಇದೀಗ ಮತ್ತೊಮ್ಮೆ 29 ರೂಪಾಯಿ ಏರಿಕೆ ಮಾಡಲಾಗಿದೆ.

Must Read