SHOCKING| ಎಲ್‌ಪಿಜಿ ಸಿಲಿಂಡರ್‌ಗಳ ಸ್ಫೋಟ: ಬಸ್‌ಗಳು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಘಟನೆ ಭಾನುವಾರ ರಾತ್ರಿ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಲ್ಕೈದು ಸಿಲಿಂಡರ್‌ಗಳು ಏಕಕಾಲಕ್ಕೆ ಬ್ಲಾಸ್ಟ್‌ ಆಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಟ್ಯಾಂಕರ್‌ನಿಂದ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬುತ್ತಿರುವ ವೇಳೆ ಈ ಘಟನೆ ನಡೆದಿರಬಹುದೆಂದು ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.

ಮಹಾರಾಷ್ಟ್ರದ ಪುಣೆ, ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ಭಾನುವಾರ ರಾತ್ರಿ 11:15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಸ್ಫೋಟದ ಸದ್ದು ಪ್ರದೇಶದಾದ್ಯಂತ ಆವರಿಸಿತ್ತು, ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ ಜ್ವಾಲೆ, ದಟ್ಟ ಹೊಗೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.  ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲಿ ಕಾಲೇಜಿಗೆ ಸೇರಿದ ಎರಡು ಬಸ್ಸುಗಳು ನಿಂತಿದ್ದು, ಸಂಪೂರ್ಣ ಸುಟ್ಟು ಕರಕಲಾಗಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ ನಾಲ್ಕೈದು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಅದೃಷ್ಟವಶಾತ್ ಎಲ್‌ಪಿಜಿ ಇದ್ದ ಟ್ಯಾಂಕರ್‌ ಸ್ಫೋಟಗೊಂಡಿಲ್ಲ‌, ಇದರಿಂದಾಗಿ ದುಡ್ಡ ಅನಾಹುತ ತಪ್ಪಿದೆ. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು  ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಪಿಂಪ್ರಿ ಚಿಂಚ್‌ವಾಡ್ ಅಗ್ನಿಶಾಮಕ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಈ ದುರಂತದಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!