ರಾಷ್ಟ್ರೀಯ ಹೆದ್ದಾರಿ ಬಳಿ ಎಲ್‌ಪಿಜಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಅನಿಲ ಸೋರಿಕೆ

ಹೊಸದಿಗಂತ ವರದಿ, ಕುಮಟಾ:

ತಾಲೂಕಿನ ಹೊನ್ಮಾವ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಲ್.ಪಿ.ಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆ ಆಗುತ್ತಿರುವ  ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅನಿಲ ಸೋರಿಕೆ ಆಗುತ್ತಿರುವ ಕಾರಣ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ತಾಲೂಕು ಆಡಳಿತ ರಿಕ್ಷಾದಲ್ಲಿ ಪ್ರಚಾರ ಕಾರ್ಯ ನಡೆಸಿ ಸುತ್ತ ಮುತ್ತಲಿನ ಜನರು ಅಂಗಡಿಕಾರರು ಯಾವುದೇ ರೀತಿಯ ಬೆಂಕಿ ಉರಿಸುವ ಕೆಲಸ ಮಾಡದಂತೆ ಜಾಗೃತಿ ಮೂಡಿಸಲಾಗಿದೆ. ಸ್ಥಳೀಯರಿಗೆ ತಾತ್ಕಾಲಿಕವಾಗಿ ಕೊಂಕಣ ಎಜುಕೇಷನ್ ಸಂಸ್ಥೆಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಂಗಳೂರಿನಿಂದ ತಜ್ಞರು ಆಗಮಿಸಿ ಪರಿಶೀಲನೆ ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!