ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ನಿಂದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಉಚ್ಚಾಟನೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ಶಿವರಾಮೇಗೌಡ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ.
ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದರು. ಶಿವರಾಮೇಗೌಡ ಪಕ್ಷದಿಂದ ಹೊರಹಾಕಲು ರಾಜ್ಯಾಧ್ಯಕ್ಷರಿಗೆ ಸೂಚನೆ ನೀಡಿದ್ದರು.