ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿಂದು ಲಖನೌ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಲಖನೌ ಹಾಗೂ ಮುಂಬೈ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಏಕಾನ ಸ್ಟೇಡಿಯಂ ಆತಿಥ್ಯ ವಹಿಸಿದೆ. ಲಖನೌ ತಂಡದಲ್ಲಿ ಕೆಲವು ಬದಲಾವಣೆಗಳಾಗಿದ್ದು, ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಮಾರಕ ವೇಗಿ ಮಯಾಂಕ್ ಯಾದವ್ ಹಾಗೂ ಧವಳ್ ಕುಲಕರ್ಣಿ ತಂಡ ಕೂಡಿಕೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದೆ. ಇನ್ನುಳಿದ ಎಲ್ಲಾ ಪಂದ್ಯದಲ್ಲಿ ಗೆದ್ದರಷ್ಟೇ ತಂಡ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲಿದ್ದು, ಸೋತರೆ ರೇಸ್‌ನಿಂದ ಹೊರಬೀಳುವುದು ಖಚಿತ.
ಮತ್ತೊಂದೆಡೆ ಲಖನೌ ಆಡಿರುವ 9ರಲ್ಲಿ 5 ಪಂದ್ಯ ಗೆದ್ದಿದೆ. ಈ ಪಂದ್ಯದಲ್ಲಿ ಗೆದ್ದರೆ ತಂಡದ ಪ್ಲೇ-ಆಫ್ ಹಾದಿ ಸುಲಭವಾಗಲಿದ್ದು, ಸೋತರೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಲಿದೆ.