VIRAL VIDEO| ರಕ್ಷಕರೇ..ಭಕ್ಷಕರಾದರೆ? ಶಾಲಾ ಬಾಲಕಿಗೆ ಪೊಲೀಸಪ್ಪನಿಂದ ಕಿರುಕುಳ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಕಿರುಕುಳ ನೀಡಿದರೆ? ಇದು ಲಕ್ನೋದಲ್ಲಿ ನಡೆದ ಘಟನೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಹೆಡ್ ಕಾನ್ ಸ್ಟೇಬಲ್ ನನ್ನು ಪೊಲೀಸರು ಅಮಾನತುಗೊಳಿಸಿದ್ದಾರೆ.

ಲಕ್ನೋದಲ್ಲಿ ಶಹದತ್ ಅಲಿ ಎಂಬ ಹೆಡ್ ಕಾನ್‌ಸ್ಟೆಬಲ್ ಸೈಕಲ್‌ನಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಬೆನ್ನಟ್ಟಿದ್ದಾನೆ. ಮಹಿಳೆಯೊಬ್ಬರು ಅವನನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿರುವಾಗ ವಿಡಿಯೋ ಮಾಡಿದ್ದಾರೆ. ವಿದ್ಯಾರ್ಥಿಯನ್ನು ಏಕೆ ಹಿಂಬಾಲಿಸುತ್ತಿದ್ದೀರಿ ಎಂದು ಮಹಿಳೆ ಕೇಳಿದಾಗ ಪೊಲೀಸಪ್ಪನ ಬಳಿ ಉತ್ತರ ಇಲ್ಲದಂತಾಗಿದೆ. ಪ್ರತಿದಿನ ಏರಿಯಾದಲ್ಲಿ ಹುಡುಗಿಯರನ್ನು ಬೆನ್ನಟ್ಟುತ್ತಿದ್ದ ವಿಡಿಯೋ ತೆಗೆದ ಮಹಿಳೆ ಕಿರುಕುಳದ ಆರೋಪ ಮಾಡುತ್ತಿದ್ದಾರೆ. ಈ ಸಂಪೂರ್ಣ ಘಟನೆಯನ್ನು ವಿಡಿಯೋ ಮೂಲಕ ಟ್ವಿಟರ್‌ನಲ್ಲಿ ಹಂಚಿಕೊಂಡ ನಂತರ ಉತ್ತರ ಪ್ರದೇಶ ಪೊಲೀಸರು ಶಹದತ್ ಅಲಿಯನ್ನು ಅಮಾನತುಗೊಳಿಸಿದ್ದಾರೆ. ಮತ್ತೊಂದೆಡೆ, ಸ್ಥಳೀಯರು ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಲಕ್ನೋ ಸೆಂಟ್ರಲ್ ಡಿಸಿಪಿ ಅಪರ್ಣಾ ಕೌಶಿಕ್ ಅವರನ್ನು ಕೂಡಲೇ ಅಮಾನತುಗೊಳಿಸಲಾಗಿದೆ. ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!