ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿ ಲಖನೌ- ರಾಜಸ್ಥಾನ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್ ಎರಡನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗುತ್ತಿದ್ದು, ಕೆ.ಎಲ್.ರಾಹುಲ್ ಟಾಸ್​ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಖನೌ ತಂಡ ಎವಿನ್ ಲೂಯಿಸ್​ ಮತ್ತು ಆ್ಯಂಡ್ರ್ಯೂ ಟೈ ಅವರ ಬದಲಾಗಿ ಮಾರ್ಕಸ್​ ಸ್ಟೋನಿಸ್​ ಮತ್ತು ಚಮೀರಾ ಅವರಿಗೆ ಅವಕಾಶ ನೀಡಿದೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಯುವ ಆರಂಭಿಕ ಜೈಸ್ವಾಲ್ ಬದಲಿಗೆ ರಾಸಿ ವ್ಯಾನ್ ಡರ್​ ಡಾಸೆನ್ ಸೇರಿದ್ದಾರೆ.
ಲಖನೌ ತಂಡ ಆಡಿರುವ 4 ಪಂದ್ಯಗಳಲ್ಲಿ 3 ಜಯ ಮತ್ತು 1 ಸೋಲಿನೊಂದಿಗೆ 4ನೇ ಸ್ಥಾನದಲ್ಲಿದ್ದರೆ, ರಾಯಲ್ಸ್ 3 ಪಂದ್ಯಗಳಿಂದ 2 ಗೆಲುವು, ಒಂದು ಸೋಲಿನೊಂದಿಗೆ 5ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆ.ಎಲ್.ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ / ಕೀಪರ್), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!