ಲೂಧಿಯಾನ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ: 9ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾನುವಾರ ಪಂಜಾಬ್ ರಾಜ್ಯದ ಲೂಧಿಯಾನ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ 9 ಜನರು ಸಾವನ್ನಪ್ಪಿದ್ದು, ಮತ್ತು ಇತರ 10 ಮಂದಿ ಅಸ್ವಸ್ಥಗೊಂಡಿದ್ದಾರೆ. ಲೂಧಿಯಾನದ ಗಿಯಾಸ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗ್ಯಾಸ್ ಸೋರಿಕೆ ಸಂಭವಿಸಿದ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಸ್ವಸ್ಥರಾದವರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು

“ಖಂಡಿತವಾಗಿ, ಇದು ಅನಿಲ ಸೋರಿಕೆ ಪ್ರಕರಣವಾಗಿದೆ. ಜನರನ್ನು ಸ್ಥಳಾಂತರಿಸಲು ಎನ್‌ಡಿಆರ್‌ಎಫ್ ತಂಡವು ಸ್ಥಳದಲ್ಲಿದೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತದೆ. ಈ ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಅಸ್ವಸ್ಥರಾಗಿದ್ದಾರೆ” ಎಂದು ಲುಧಿಯಾನ ಪಶ್ಚಿಮದ ಎಸ್‌ಡಿಎಂ ಸ್ವಾತಿ ಎಎನ್‌ಐಗೆ ತಿಳಿಸಿದ್ದಾರೆ.

ವೈದ್ಯರು ಮತ್ತು ಆಂಬ್ಯುಲೆನ್ಸ್‌ಗಳ ತಂಡವನ್ನು ಸಹ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ವಿಟರ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘಟನೆಯನ್ನು “ದುಃಖಕರ” ಎಂದು ಬಣ್ಣಿಸಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!