June 26, 2026
Friday, June 26, 2026
spot_img

ಲುಂಗಿ ಎನ್‌ಗಿಡಿ ಈಗ ಹೇಗಿದ್ದಾರೆ? ಡಿಸ್ಚಾರ್ಜ್ ಆದ್ರಾ? ಹೊರಬಿತ್ತು ಬಿಗ್ ಹೆಲ್ತ್ ಅಪ್​ಡೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ ವೇಳೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೈದಾನದಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್‌ಗಿಡಿ ಬಗ್ಗೆ ಹೆಲ್ತ್ ಅಪ್​ಡೇಟ್ ಹೊರಬಿದ್ದಿದ್ದು, ಆಸ್ಪತ್ರೆಯ ಮೂಲಗಳ ಪ್ರಕಾರ ಅವರು ಚೇತರಿಸಿಕೊಂಡಿದ್ದು, ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿ ತಂಡದ ಹೋಟೆಲ್‌ಗೆ ಮರಳಿದ್ದಾರೆ.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದಲ್ಲಿ ಎನ್‌ಗಿಡಿ ಸಮತೋಲನ ತಪ್ಪಿ ಬಿದ್ದು ತಲೆಗೆ ಬಲವಾದ ಪೆಟ್ಟು ತಗುಲಿತ್ತು. ತಕ್ಷಣವೇ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಅವರನ್ನು ಸ್ಟ್ರೆಚರ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದರು.

ಇದನ್ನೂ ಓದಿ:

ದೆಹಲಿ ಪೊಲೀಸರು ತುರ್ತು ಗ್ರೀನ್ ಕಾರಿಡಾರ್ ನಿರ್ಮಿಸಿ ಅಂಬ್ಯುಲೆನ್ಸ್ ಅನ್ನು 11 ನಿಮಿಷಗಳಲ್ಲಿ ಆಸ್ಪತ್ರೆ ತಲುಪುವಂತೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ಪರೀಕ್ಷೆ ನಡೆಸಿದ ಬಳಿಕ ಮೆದುಳು ಅಥವಾ ಬೆನ್ನುಮೂಳೆಗೆ ಗಂಭೀರ ಗಾಯಗಳಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಕೆಲವು ಗಂಟೆಗಳ ನಿಗಾದ ನಂತರ ಅವರ ಸ್ಥಿತಿ ಸ್ಥಿರವಾಗಿರುವುದರಿಂದ ವೈದ್ಯರು ಡಿಸ್ಚಾರ್ಜ್‌ಗೆ ಅನುಮತಿ ನೀಡಿದ್ದಾರೆ. ಆದರೂ ಸಂಪೂರ್ಣ ವಿಶ್ರಾಂತಿ ಅಗತ್ಯವಿದೆ ಎಂದು ಸೂಚಿಸಲಾಗಿದೆ. ಈ ಕಾರಣದಿಂದ ಮುಂದಿನ ಪಂದ್ಯದಲ್ಲಿ ಎನ್‌ಗಿಡಿ ಆಡುವ ಸಾಧ್ಯತೆ ಕಡಿಮೆ ಇದೆ. ಅವರ ಬದಲಿಗೆ ಮಿಚೆಲ್ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !