ಐಷಾರಾಮಿ ಬಸ್, ಟ್ರಕ್‌ ನಡುವೆ ಭೀಕರ ಅಪಘಾತ: 22 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಐಷಾರಾಮಿ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 22 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಮುಂಬೈ-ನಾಗ್ಪುರ ಜಿಲ್ಲೆಯ ಫುಲಂಬ್ರಿ ಬಳಿ ಮುಂಜಾನೆ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಖಾಸಗಿ ಐಶಾರಾಮಿ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಕನಿಷ್ಠ 22 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರನ್ನು ಔರಂಗಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!