ವಿದ್ಯುತ್ ಕಂಬಕ್ಕೆ ಐಷಾರಾಮಿ ಕಾರು ಡಿಕ್ಕಿ ಸಂಪೂರ್ಣ ನಜ್ಜುಗುಜ್ಜು: ಚಾಲಕ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಜ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದೆ.

ಘಟನೆಯಲ್ಲಿ ಕಾರಿನ ಚಾಲಕ ಉಜಿರೆ ನಿವಾಸಿ ಪ್ರಜ್ವಲ್ ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಐಷಾರಾಮಿ ಕಾರು ಸಂಪೂರ್ಣ ಜಖಂಗೊಂಡಿದೆ.

ತಕ್ಷಣ ಸ್ಥಳೀಯರು ಪ್ರಜ್ವಲ್‌ನನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!