ಲೈಗಿಂಕ ದೌರ್ಜನ್ಯ ಆರೋಪ: ಯುವಕನ ಬಂಧನ

ಹೊಸದಿಗಂತ ವರದಿ, ಮುಂಡಗೋಡ:

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಅಪಹರಿಸಿ ಲೈಗಿಂಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ.
ಮಳಗಿ ವ್ಯಾಪ್ತಿಯ ನಿವಾಸಿ ಕಿರಣ ಹಿರೆಕಣಗಿ ಆರೋಪಿತನಾಗಿದ್ದಾನೆ. ಅಪ್ರಾಪ್ತ ವಿದ್ಯಾರ್ಥಿನಿ ಸೆ.೧೩ ರಂದು ಮನೆಯಿಂದ ಮಳಗಿ ಗ್ರಾಮದ ಪದವಿ ಪೂರ್ವ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದ ಬಗ್ಗೆ ಅಪ್ರಾಪ್ತಿಯ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡಿದ್ದರು. ಶುಕ್ರವಾರ ಪೊಲೀಸರು ಯುವಕನ ವಿರುದ್ಧ ಪೋಕ್ಸ್ ಅಡಿ ದೂರು ದಾಖಲಿಸಿಕೊಂಡು ಆರೋಪಿನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!