Tuesday, March 28, 2023

Latest Posts

ಮಾ. 12 ರಂದು ಪ್ರಧಾನಿ ಮೋದಿಯಿಂದ ವಿಶ್ವದ ಅತಿದೊಡ್ಡ ಹುಬ್ಬಳ್ಳಿ ರೈಲ್ವೆ ಪ್ಲಾಟ್​ಫಾರ್ಮ್​ ಲೋಕಾರ್ಪಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಶ್ವದರ್ಜೆಯ ಪ್ಲಾಟ್‌ಫಾರ್ಮ್‌ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಅಧಿಕೃತವಾಗಿ ಮ. 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ.

ಮಾರ್ಚ್ 12ಕ್ಕೆ ಹುಬ್ಬಳ್ಳಿ – ಧಾರವಾಡಕ್ಕೆ ಪ್ರಧಾನಿ ಭೇಟಿ ನೀಡಲಿದ್ದು, ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ಜೊತೆಗೆ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ತಿಳಿಸಿದರು.

10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ ಪ್ಲಾಟ್‌ಫಾರ್ಮ್‌ ವಿಸ್ತರಣೆ: ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌ಫಾರ್ಮ್‌ 550 ಮೀಟರ್‌ ಉದ್ದ ಹೊಂದಿತ್ತು. ಇದೀಗ ಈ ಪ್ಲಾಟ್‌ಫಾರ್ಮ್‌ನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ಗೆ ವಿಸ್ತರಣೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಈ ಹೊಸ ರೈಲು ಪ್ಲಾಟ್‌ಫಾರ್ಮ್‌ ಲೋಕಾರ್ಪಣೆ ಮಾಡಿದ ನಂತರ 1,366 ಮೀಟರ್ ಉದ್ದದ ಗೋರಖ್‌ಪುರ ರೈಲು ನಿಲ್ದಾಣವನ್ನು ಹಿಂದಿಕ್ಕಲಿದೆ. ಐಐಟಿ ಕ್ಯಾಂಪಸ್​ನಿಂದಲೇ ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಲೋಕಾರ್ಪಣೆಯನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಸಾಂಕೇತಿಕವಾಗಿ ಮಾಡಲಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!