ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ: ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಎಂ.ಬಿ.ಪಾಟೀಲ್‌

ಹೊಸದಿಗಂತ ವರದಿ ವಿಜಯಪುರ:

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ ದಿಢೀರ್ ಬೆಂಗಳೂರಿನತ್ತ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಪ್ರಯಾಣ ಬೆಳೆಸಿದ್ದಾರೆ.

ತಮ್ಮ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ ಎಂ.ಬಿ. ಪಾಟೀಲ್ ರಸ್ತೆ ಮಾರ್ಗವಾಗಿ ಬೆಂಗಳೂರಿನತ್ತ ದಿಢೀರ್ ಪ್ರಯಾಣ ಬೆಳೆಸಿದ್ದು, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಣೆಗಾಗಿ ತೆರಳಿದ್ದಾರೆ.

ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹಾಗೂ ಸಿದ್ದರಾಮಯ್ಯರಿಂದ ಕರೆ ಬಂದಿರುವ ಮಾಹಿತಿ ಹಿನ್ನೆಲೆ, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!