ಹೊಸದಿಗಂತ ವರದಿ ತುಮಕೂರು:
ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಕಳೆದ ನಾಲ್ಕು ವರ್ಷಗಳಿಂದ ಕೊಡಮಾಡುತ್ತಿರುವ ಶ್ರೀದೇವಿ ರಮಣ ಮಹರ್ಷಿ ಪ್ರಶಸ್ತಿಯ ನ್ನು ಈ ವರ್ಷ ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಅವರಿಗೆ ಸೆಪ್ಟೆಂಬರ್ 30ರಂದು ಪ್ರಧಾನ ಮಾಡಲಾಗುತ್ತಿದೆ ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಆರ್.ಹುಲಿನಾಯ್ಕರ್ ತಿಳಿಸಿದರು.
ಇಂದು ಶ್ರೀದೇವಿ ಶಿಕ್ಷಣ ಸಂಸ್ಥೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಪ್ರಶಸ್ತಿ ಪ್ರದಾನ ಸಮಾರಂಭ ವನ್ನು ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು.ಮಾಜಿ ಮುಖ್ಯ ಮಂತ್ರಿ.ಎಂ.ವೀರಪ್ಪ ಮೊಯಿಲಿ ಪ್ರಶಸ್ತಿ ಪ್ರಧಾನ ಮಾಡುವರು.ಎಂ.ಎನ್. ವೆಂಕಟಾಚಲಯ್ಯ ಅವರ ಕುರಿತ ಕೃತಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ.ಹೆಚ್.ಕೆ.ಪಾಟೀಲ್ ಲೋಕಾರ್ಪಣೆ ಮಾಡುವರು.ಡಾ.ಎನ್.ಕೆ.ವೆಂಕಟರಮಣ, ಅಸಗೋಡು ಜಯಸಿಂಹ ಹಾಜರಿರುವರು ಎಂದು ಹುಲಿನಾಯ್ಕರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಡಾ.ರಮಣಹುಲಿನಾಯ್ಕರ್.ಎಂ.ಎಸ್.ಪಾಟೀಲ್.ಉಪಸ್ಥಿತರಿದ್ದರು.