ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹು ಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ಮೀ ಟೂ ಆರೋಪ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ವರದಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಈ ಮೂಲಕನಟ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀ ಟೂ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಕುರಿತು ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೂಡ ಆರಂಭಿಸಿದ್ದರು. ಆದರೆ ಯಾವುದೇ ಸರಿಯಾದ ಸಾಕ್ಷಿಯನ್ನು ಒದಗಿಸಿರಲಿಲ್ಲ.
ಹೀಗಾಗಿ ಪ್ರಕರಣ ಸಂಬಂಧ ಎಲ್ಲಾ ರೀತಿಯಲ್ಲಿ ತನಿಖೆ ನಡೆಸಿದ್ದ ಕಬ್ಬನ್ ಪಾರ್ಕ್ ಪೊಲೀಸರು, ನ್ಯಾಯಾಲಯಕ್ಕೆಸಾಕ್ಷ್ಯಾಧಾರಗಳ ಕೊರತೆಯ ಹಿನ್ನಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣ ನಡೆಸಿದ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ , ಬಿ-ರಿಪೋರ್ಟ್ ವರದಿಯನ್ನು ಅಂಗೀಕರಿಸಿದೆ. ಈ ಮೂಲಕ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್ ನೀಡಿದೆ.