September 16, 2026
Wednesday, September 16, 2026
spot_img

ಮೋದಿಗೆ ಮ್ಯಾಕ್ರನ್ ಫೋನ್ ಕಾಲ್: ಸಮುದ್ರ ಮಾರ್ಗದ ಭದ್ರತೆಗೆ ‘ಆತ್ಮೀಯ ಗೆಳೆಯರ’ ಜಂಟಿ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿನಕ್ಕೊಂದು ತಿರುವು ಪಡೆಯುತ್ತಿರುವ ಪಶ್ಚಿಮ ಏಷ್ಯಾದ ಸಂಘರ್ಷದ ಬೆನ್ನಲ್ಲೇ, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಹತ್ವದ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸುದೀರ್ಘ ಚರ್ಚೆಯಲ್ಲಿ ಪ್ರಮುಖವಾಗಿ ಸಮುದ್ರ ಮಾರ್ಗದ ಭದ್ರತೆ ಮತ್ತು ಪ್ರಾದೇಶಿಕ ಶಾಂತಿಯ ಬಗ್ಗೆ ಗಂಭೀರ ವಿಚಾರ ವಿನಿಮಯ ನಡೆದಿದೆ.

ಜಾಗತಿಕ ವ್ಯಾಪಾರದ ಜೀವನಾಡಿಯಂತಿರುವ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆಯನ್ನು ಪುನಃಸ್ಥಾಪಿಸಲು ಮತ್ತು ಮುಕ್ತ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲು ಇಬ್ಬರೂ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ.

ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ತಣಿಸಲು ಮತ್ತು ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಭಾರತ-ಫ್ರಾನ್ಸ್ ನಿರಂತರ ಸಹಕಾರ ನೀಡುವುದಾಗಿ ಭರವಸೆ ನೀಡಿವೆ.

ಈ ಮಾತುಕತೆಯ ಬಗ್ಗೆ ಪ್ರಧಾನಿ ಮೋದಿ ಅವರು ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮ್ಯಾಕ್ರನ್ ಅವರನ್ನು “ನನ್ನ ಆತ್ಮೀಯ ಗೆಳೆಯ” ಎಂದು ಸಂಬೋಧಿಸಿ ಜಾಗತಿಕ ಶಾಂತಿಗಾಗಿ ಒಟ್ಟಾಗಿ ಶ್ರಮಿಸುವ ಸಂಕಲ್ಪ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !