ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್‌ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ಏಕಾಏಕಿ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೀಕೆಂಡ್‌ನಲ್ಲಿ ಬೃಂದಾವನಕ್ಕೆ ಪ್ರವಾಸಿಗರು ಭೇಟಿ ನೀಡಿದ್ದು, ನಾಯಿ ದಾಳಿ ಮಾಡಿದೆ. ತಕ್ಷಣವೇ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರತಾ ಸಿಬ್ಬಂದಿ ನಾಯಿಗಳನ್ನು ಓಡಿಸಿ, ಬೃಂದಾವನವನ್ನು ಬಂದ್ ಮಾಡಿದ್ದಾರೆ.