ಹುಚ್ಚು ನಾಯಿ ದಾಳಿಗೆ ಇಬ್ಬರು ಮಕ್ಕಳು ಬಲಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹುಚ್ಚುನಾಯಿ ಕಡಿತಕ್ಕೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ಕುರುಗೋಡು ತಾಲೂಕಿನ ಬಾದನಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುರಕ್ಷಿತ (3) ಶಾಂತಕುಮಾರ್ (7) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿತ್ತು.

ಸುರಕ್ಷಿತಾ ಮುಖ ಭಾಗಕ್ಕೆ ಕಚ್ಚಿದೆ. ನಂತರ ಶಾಂತಕುಮಾರ್ ಕೈ ಗೆ ಕಚ್ಚಿದೆ.  ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!