ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ (Madal Mallikarjun) ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಆರು ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಣಗವಾಡಿ ವೀರೇಶ್ ಮಾಹಿತಿ ನೀಡಿದ್ದಾರೆ. ಮಾಡಾಳ್ ಮಲ್ಲಿಕಾರ್ಜುನ ಈಗಾಗಲೇ ಸ್ವಾಭಿಮಾನಿ ಹೆಸರಿನಲ್ಲಿ ಸಭೆ ನಡೆಸಿದ್ದು ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಎಲ್ಲ ವಿಚಾರಗಳನ್ನು ಪರಿಗಣಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಪಕ್ಷದ ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದು ವೀರೇಶ್ ಮಾಹಿತಿ ನೀಡಿದ್ದಾರೆ.