Tuesday, September 9, 2025

ಮದ್ದೂರು ಬಂದ್‌: ಮುಂಜಾಗ್ರತಾ ಕ್ರಮವಾಗಿ ಭದ್ರತೆ ಮತ್ತಷ್ಟು ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗಣೇಶನ ಮೂರ್ತಿ ವಿಸರ್ಜನೆಯ ವೇಳೆ ಭಾನುವಾರ ರಾತ್ರಿ ನಡೆದ ಕೋಮು ಘರ್ಷಣೆ ಬಳಿಕ ಮದ್ದೂರು ಬಂದ್’ಗೆ ಬಿಜೆಪಿ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಎನ್ಎಸ್ ಬಂದ್’ಗೆ ಕರೆ ನೀಡಿದ್ದು, ಬಂದ್ ಕರೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಬೆಂಬಲ ನೀಡಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ವರು ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ಎಸ್‌ಪಿಗಳು ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳು ಸೇರಿದಂತೆ ಸುಮಾರು 800 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಹೇಳಿದ್ದಾರೆ.

ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿಯುತವಾಗಿದೆ. ನಾಳೆ ಬೆಳಿಗ್ಗೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ