ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ ಇವೆಲ್ಲವುಗಳ ಮೂಲಕ ರಾಜ್ಯ ಸರ್ಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ. ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.
ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.