January15, 2026
Thursday, January 15, 2026
spot_img

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ದಿಗಂತ ವರದಿ ವಿಜಯಪುರ:

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಆಲಮೇಲ ಪಟ್ಡಣದಲ್ಲಿ ನಡೆದಿದೆ.

ಮೃತಪಟ್ಟವನನ್ನು ಇಲ್ಲಿನ ಅಜರುದ್ದೀನ್ ಅಬ್ದುಲ್ ರಜಾಕ್ ಮಕಾನದಾರ್ (38) ಎಂದು ಗುರುತಿಸಲಾಗಿದೆ.

ಅಜರುದ್ದೀನ್ ಈತ ಮಹಾರಾಷ್ಟ್ರ ದಕ್ಷಿಣ ಸೊಲ್ಲಾಪುರದ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ವಿಜಯಪುರ ಜಿಲ್ಲೆಯ ಅಲಮೇಲ ಪಟ್ಟಣದಲ್ಲಿ ವಾಸವಾಗಿದ್ದ. ಬೈಕ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Most Read

error: Content is protected !!