ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ – 2024 ಕಿರೀಟವು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ.
ನವದೆಹಲಿಯಲ್ಲಿ ಐದು ದಿನಗಳು ನಡೆದ ಅಂತಿಮ ಸುತ್ತಿನಲ್ಲಿ ಕರ್ನಾಟಕದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದ್ದಾರೆ. ಜೊತೆಗೆ ಅದೇ ವೇದಿಕೆಯಲ್ಲಿ ಸೋಷಿಯಲ್ ಇನ್ಫ್ಲುಯೆನ್ಸರ್ ಗೌರವಕ್ಕೂ ಪಾತ್ರರಾಗಿದ್ದಾರೆ.
ವೃತ್ತಿಯಿಂದ ಪಶುಪಾಲನ ವೈದ್ಯರಾದ ಡಾ. ಪ್ರಿಯಾ ಗೋಸ್ವಾಮಿ, ಮೂಲತಃ ಪಂಜಾಬಿಯಾದರೂ ಗೋವಾದಲ್ಲಿ ಬೆಳೆದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿದ್ದಾರೆ. ಭಾರತೀಯ ಸೇನೆಯಲ್ಲಿರುವ ಇವರ ಪತಿ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು.