Sunday, August 14, 2022

Latest Posts

ಮಾದೇಗೌಡರ ಆರೋಗ್ಯ ವಿಚಾರಿಸಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಡಿಸಿಎಂ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮದ್ದೂರು:

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಹಾಗೂ ಉಪ ಮುಖ್ಯಮಂತ್ರಿ ಅಶ್ವಥ್‌ನಾರಾಯಣ್ ಅವರು ತಾಲೂಕಿನ ಭಾರತೀನಗರದಲ್ಲಿರುವ ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ಮಾಜಿ ಸಂಸದ ಜಿ.ಮಾದೇಗೌಡ ಯೋಗಕ್ಷೇಮ ವಿಚಾರಿಸಿದರು.
ಹಿರಿಯ ಮುತ್ಸದಿ ಹಾಗೂ ಕಾವೇರಿ ಹೋರಾಟಗಾರ ಜಿ.ಮಾದೇಗೌಡರವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಡಾ.ನಿರ್ಮಲಾನಂದನಾಥಸ್ವಾಮೀಜಿ ಹಾಗೂ ಉಪಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ್ ರವರು ಆಸ್ಪತ್ರೆಯ ಐಸಿಯು ಕೊಠಡಿಗೆ ತೆರಳಿ ಜಿ.ಮಾದೇಗೌಡ ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು.
ನಂತರ ಡಾ. ನಿರ್ಮಲಾನಂದನಾಥಸ್ವಾಮೀಜಿ ಅವರು ಜಿ.ಮಾದೇಗೌಡರ ಕೈಹಿಡಿದುಕೊಂಡು ನೀವು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬರಬೇಕೆಂದು ದೇವರಲ್ಲಿ ಪ್ರಾಥಿಸುತ್ತೇನೆ ಎಂದು ಹೇಳಿದರು.
ನಂತರ ಉಪಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ್ ಅವರು ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ಕೊಠಡಿಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ವೈದ್ಯರಿಂದ ಮಾಜಿ ಸಂಸದ ಜಿ.ಮಾದೇಗೌಡ ಯೋಗಕ್ಷೇಮ ವಿಚಾರಿಸಿದರು.
ಜಿಲ್ಲಾಧಿಕಾರಿ ಎಸ್. ಅಶ್ವಥಿ, ತಹಶೀಲ್ದಾರ್ ವಿಜಯ್‌ಕುಮಾರ್, ಡಾ.ಪ್ರಕಾಶ್, ಬಿ.ಎಂ.ನಂಜೇಗೌಡ, ಸೇರಿದಂತೆ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss