ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನುಗೆ ಜಾಮೀನು ಲಭಿಸಿದ್ದು, ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಅವರಿಗೆ ಘಟನೆಯನ್ನು ತಿಳಿಸುತ್ತೇನೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಯೋಜಿತ ರೀತಿಯಲ್ಲಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ಬಿಡುಗಡೆಯಾಗಿದೆ. ಪ್ರತೀ ಹಂತದಲ್ಲಿಯೂ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಏನೇ ಆದರೂ ಕಲಾ ತಾಯಿ ಶಾರದೆ ನನ್ನ ಕೈ ಬಿಡುವುದಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ