Monday, August 15, 2022

Latest Posts

ಹಿರಿಯರ ಸಲಹೆ ಪಡೆದು ಕಾಂಗ್ರೆಸ್ ಸೇರ್ಪಡೆ: ಮಧುಬಂಗಾರಪ್ಪ

ಹೊಸದಿಗಂತ ವರದಿ, ಶಿವಮೊಗ್ಗ:

ಮುಖಂಡರು ಹಾಗೂ ಹಿರಿಯರ ಸಲಹೆ ಪಡೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಮಾಜಿ ಶಾಸಕ ಎಸ್. ಮಧುಬಂಗಾರಪ್ಪ ಸ್ಪಷ್ಟಪಡಿಸಿದರು.
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಪಕ್ಷದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಏಪ್ರಿಲ್ ಎರಡನೇ ವಾರದಲ್ಲಿ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿಳಿಸಿದಾಗ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ರಾಷ್ಟ್ರಮಟ್ಟದ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಎಚ್‌ಡಿಕೆ ಅವರ ಮೇಲೆ ಗೌರವವಿದೆ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಗ್ಗೆ ಈಗಲೂ ಗೌರವವಿದೆ. ಜೆಡಿಎಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಅಧಿಕಾರಕ್ಕೆ ಬಂದ ತರುವಾಯ ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿತು ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಸ್. ಬಂಗಾರಪ್ಪ ಅವರ ಮೇಲೆ ಅಪಾರ ಗೌರವವನ್ನು ಹೊಂದಿದ್ದಾರೆ. ಅವರು ನಮ್ಮ ಕುಟುಂಬದ ಸದಸ್ಯರಿದ್ದಂತೆ ಎಂದರು.
ಮುಖಂಡರಾದ ಎಚ್. ಗಣಪತಿ, ಕೆ.ಪಿ. ರುದ್ರಗೌಡ, ಜಯಶೀಲಪ್ಪ, ಆಹ್ಮದ್ ಶರೀಫ್, ಪರಸಪ್ಪ, ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss