ಹೊಸದಿಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 7 , 17 ಹಾಗೂ 23 ರಂದು ಐದು ರಾಜ್ಯಗಳ ಚುನಾವಣೆ ನಡೆಯಲಿದೆ.
ಮಧ್ಯಪ್ರದೇಶ (Madhya Pradesh Polls) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ (BJP) ಸೋಮವಾರ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಬುಧ್ನಿಯಿಂದ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಡಾಟಿಯಾದಿಂದ, ಗೋಪಾಲ್ ಭಾರ್ಗವ ರೆಹ್ಲಿಯಿಂದ, ವಿಶ್ವಾಸ್ ಸಾರಂಗ್ ನರೇಲಾದಿಂದ ಮತ್ತು ತುಳಸಿರಾಮ್ ಸಿಲಾವತ್ ಸಾನ್ವೆರ್‌ನಿಂದ ಸ್ಪರ್ಧಿಸಲಿದ್ದಾರೆ.
230 ಸದಸ್ಯರಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಇಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ.