ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಗೋಡ್ಸೆ-ಗಾಂಧಿ ಸಿದ್ಧಾಂತಗಳ ನಡುವಿನ ಹೋರಾಟ ಎಂದ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಇದು ಗೋಡ್ಸೆಯ ಆರ್‌ಎಸ್‌ಎಸ್, ಬಿಜೆಪಿ ಸಿದ್ಧಾಂತ ಮತ್ತು ಗಾಂಧಿಯ ಕಾಂಗ್ರೆಸ್‌ ಸಿದ್ಧಾಂತಗಳ ನಡುವಿನ ಹೋರಾಟ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಜನಾಕ್ರೋಶ ರ‍್ಯಾಲಿಯನ್ನುದ್ದೇಶಿ ಮಾತನಾಡಿದ ಅವರು, ಈ ಚುನಾವಣೆ ದ್ವೇಷದ ವಿರುದ್ಧ ಪ್ರೀತಿ ಮತ್ತು ಸಹೋದರತ್ವ ಬೆಸೆಯುವ ಚುನಾವಣೆ ಎಂದು ಹೇಳಿದರು.

ಬಿಜೆಪಿ ನಾಯಕರು ಎಲ್ಲಿಗೆ ಹೋದರೂ ದ್ವೇಷವನ್ನೇ ಹರಡುತ್ತಾರೆ. ಮಧ್ಯಪ್ರದೇಶದ ರೈತರು ಮತ್ತು ಯುವಕರು ಅವರನ್ನು ದ್ವೇಷಿಸಲು ಶುರು ಮಾಡಿದ್ದಾರೆ. ಜನರ ನಡುವೆ ಹಂಚಿದ್ದ ದ್ವೇಷವನ್ನು ಅವರು ಮರಳಿ ಪಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಾನು ಭಾರತ್ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದಲ್ಲಿ ಹಲವಾರು ರೈತರನ್ನು ಭೇಟಿಯಾಗಿದ್ದೆ . ಅಲ್ಲಿ ನಮ್ಮೊಂದಿಗೆ ಅವರು ಕೆಲವು ವಿಚಾರಗಳನ್ನ ಹಂಚಿಕೊಂಡರು. ಮಧ್ಯಪ್ರದೇಶದಲ್ಲಿ ಬಿಜೆಪಿ (BJP) ಮಾಡಿರುವ ಭ್ರಷ್ಟಾಚಾರ ದೇಶದ ಯಾವ ರಾಜ್ಯದಲ್ಲೂ ನಡೆದಿಲ್ಲ ಎಂದು ಹೇಳಿಕೊಂಡಿರುವುದಾಗಿ ತಿಳಿಸಿದರು.

ನಾವು ಅಧಿಕಾರಕ್ಕೆ ಬಂದರೆ ಏನು ಭರವಸೆ ನೀಡಿದ್ದೇವೆಯೋ ಅದನ್ನು ಪೂರೈಸುತ್ತೇವೆ. ಈಗಾಗಲೇ ಛತ್ತಿಸ್‌ಗಢದಲ್ಲೂ ನಾವು ನೀಡಿದ್ದ ಭರವಸೆಯನ್ನ ಪೂರೈಸಿದ್ದೇವೆ ಎಂದು ಅವರು ಹೇಳಿದರು. ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!