Tuesday, October 3, 2023

Latest Posts

ಮಧ್ಯಪ್ರದೇಶ, ಛತ್ತೀಸ್​​ಗಢ ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ಮೊದಲ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ಮಧ್ಯಪ್ರದೇಶ (Madhya Pradesh), ಛತ್ತೀಸ್​​ಗಢ (Chhattisgarh)ವಿಧಾನಸಭೆ ಚುನಾವಣೆಗೆ ಬಿಜೆಪಿ (BJP) ಇಂದು ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮಧ್ಯಪ್ರದೇಶದಲ್ಲಿ 39 ಅಭ್ಯರ್ಥಿಗಳು ಮತ್ತು ಛತ್ತೀಸ್​​ಗಢದಲ್ಲಿ 21 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಐವರು ಮಹಿಳಾ ಅಭ್ಯರ್ಥಿಗಳೂ ಇದ್ದಾರೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಎರಡು ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.

90 ಸದಸ್ಯರ ಛತ್ತೀಸ್ ಗಢ ವಿಧಾನಸಭೆಗೆ 21 ಮತ್ತು ಮಧ್ಯಪ್ರದೇಶಕ್ಕೆ 39 ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!