ಸೇನೆ ಕುರಿತು ನಾಲಿಗೆ ಹರಿಬಿಟ್ಟ ಮಧ್ಯಪ್ರದೇಶ DCM ಜಗದೀಶ್ ದೇವ್ಡಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸುವ ಭರದಲ್ಲಿ ಮಧ್ಯಪ್ರದೇಶದ ಡಿಸಿಎಂ ಜಗದೀಶ್ ದೇವ್ಡಾ ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಮೋದಿಯವರ ಬಲವಾದ ನಿಲುವಿಗಾಗಿ ದೇಶ ಮಾತ್ರವಲ್ಲ, ಇಡೀ ಸೇನೆಯೂ ಮೋದಿ ಅವರ ಪಾದಗಳಿಗೆ ನಮಸ್ಕರಿಸುತ್ತಿದೆ ಎಂದು ದೇವ್ಡಾ ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಅವರ ಕುಟುಂಬಗಳ ಮುಂದೆ ಗುಂಡು ಹಾರಿಸುವ ಮೊದಲು ಅವರ ಧರ್ಮವನ್ನು ಕೇಳಿದರು. ಮಹಿಳೆಯರನ್ನು ಬೇರ್ಪಡಿಸಲಾಯಿತು. ಪುರುಷರನ್ನು ಅವರ ಮಕ್ಕಳು ಮತ್ತು ಸಂಬಂಧಿಕರ ಕಣ್ಣೆದುರೇ ಕೊಲ್ಲಲಾಯಿತು . ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವವರೆಗೂ ನೆಮ್ಮದಿಯಿಂದ ಉಸಿರಾಡಲು ಸಾಧ್ಯವಿಲ್ಲ ಎಂಬ ಭಾವನೆ ಜನರಲ್ಲಿತ್ತು. ಸದ್ಯ ಪಹಲ್ಗಾಮ್‌ ದಾಳಿಗೆ ಪ್ರಧಾನಿ ಮೋದಿ ಅವರು ಕೊಟ್ಟ ಉತ್ತರವನ್ನ ಎಷ್ಟು ಹೊಗಳಿದರೂ ಸಾಲದು. ಯಶಸ್ವಿ ಪ್ರಧಾನಿಗಳಿಗೆ ಧನ್ಯವಾದ ಹೇಳಲು ಇಡೀ ದೇಶ, ದೇಶದ ಸೈನ್ಯ ಹಾಗೂ ಸೈನಿಕರು ಅವರ ಪಾದಗಳಿಗೆ ನಮಸ್ಕರಿಸುತ್ತಾರೆ ಎಂದು ಹೇಳುತ್ತಾ ಪೇಚಿಗೆ ಸಿಲುಕಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!