ಮಧ್ಯಪ್ರದೇಶ ಚುನಾವಣೆ: ಕರ್ನಾಟಕ ʻಗ್ಯಾರೆಂಟಿʼ ಫಾರ್ಮುಲಾ ಫಾಲೋ ಮಾಡಿದ ಕಮಲ್‌ ನಾಥ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದಲ್ಲಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷ ದೇಶದಲ್ಲಿ ತನ್ನ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ. ದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಅಸ್ತ್ರಗಳನ್ನು ಸಿದ್ಧಪಡಿಸುತ್ತಿದ್ದಾರೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ಚುನಾವಣೆಯಲ್ಲಿ ಜನರನ್ನು ಸೆಳೆಯಲು ಭರವಸೆಗಳ ಸುರಿಮಳೆಯಾಗಿದೆ. ಅದಕ್ಕಾಗಿ ಕಾಂಗ್ರೆಸ್‌ ಮುಖ್ಯಸ್ಥ ಕಮಲ್‌ ನಾಥ್‌ ಕರ್ನಾಟಕ ʻಗ್ಯಾರೆಂಟಿʼ ಫಾರ್ಮುಲಾ ಫಾಲೋ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆಗಳಿಗೆ 100 ಯೂನಿಟ್ ಉಚಿತ ಮತ್ತು ನಂತರ ಅರ್ಧ ಬೆಲೆಯಲ್ಲಿ 200 ಯೂನಿಟ್‌ಗಳಿಗೆ ವಿದ್ಯುತ್ ನೀಡಲಿದೆ ಎಂದು ಕಮಲ್ ನಾಥ್ ಹೇಳಿದ್ದಾರೆ.

ಜಿಲ್ಲಾ ಕೇಂದ್ರದಿಂದ 50 ಕಿ.ಮೀ ದೂರದ ಬದನವಾರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕಮಲ್ ನಾಥ್, ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಬಡ ಮಹಿಳೆಯರಿಗೆ ಮಾಸಿಕ 1500 ರೂ.ಗಳನ್ನು ನೀಡುವುದಾಗಿ ಹಾಗೂ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ತರುವುದಾಗಿ ಹೇಳಿದರು. ಈ ಬಾರಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್‌ಗೆ ಕರ್ನಾಟಕದ ಗ್ಯಾರೆಂಟಿ ಯೋಜನೆಗಳನ್ನು ದಾಳವಾಗಿ ಬಳಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!