Wednesday, August 10, 2022

Latest Posts

ಕೊರೋನಾ ಭೀತಿ: ಭೋಪಾಲ್-ಇಂದೋರ್‌ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಮಧ್ಯಪ್ರದೇಶ ಸರಕಾರ ಚಿಂತನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಅಥವಾ ಸೋಮವಾರದಿಂದ ಭೋಪಾಲ್ ಮತ್ತು ಇಂದೋರ್‌ನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​​ ಹೇಳಿದ್ದಾರೆ.
ರಾಜ್ಯದಕೊರೋನಾ ಪರಿಸ್ಥಿತಿ ಕುರಿತು ನಿನ್ನೆ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ನೈಟ್​ ಕರ್ಫ್ಯೂ ಜಾರಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ಸಹ ದಿನದಿಂದ ದಿನಕ್ಕೆ ಕೋವಿಡ್​ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಹಾಗೂ ಪ್ರತಿಯೊಬ್ಬರಿಗೂ ಥರ್ಮಲ್​ಸ್ಕ್ಯಾನಿಂಗ್​ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಚೌಹಾಣ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss