ಮಧ್ಯಪ್ರದೇಶ ರಸ್ತೆ ಅಪಘಾತಕ್ಕೆ ಮೋದಿ ಆಘಾತ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಜಮುನಾ ಬೆತುಲ್ ಜಿಲ್ಲೆಯ ಜಲ್ಲಾರ್ ಪೊಲೀಸ್ ಠಾಣೆ ಬಳಿ ಬಸ್ ಮತ್ತು ಟವೇರಾ ನಡುವೆ ಅಪಘಾತವಾಗಿ 11 ಜನರು ಸಾವನ್ನಪ್ಪಿದ್ದರು. ಈ ಭೀಕರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಅಪಘಾತ ದುಃಖಕರವಾಗಿದೆ. ಅಲ್ಲದೆ, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಗಾಯಗೊಂಡವರಿಗೆ ರೂ.50,000 ಆರ್ಥಿಕ ನೆರವು ಘೋಷಿಸಲಾಗಿದೆ.

Pained by the loss of lives due to an accident in Betul, MP. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. Rs. 50,000 would be given to the injured: PM @narendramodi

— PMO India (@PMOIndia) November 4, 2022

ಮಧ್ಯಪ್ರದೇಶದ ಜಮುನಾ ಬೆತುಲ್ ಜಿಲ್ಲೆಯ ಜಲ್ಲಾರ್ ಪೊಲೀಸ್ ಠಾಣೆ ಬಳಿ ಶುಕ್ರವಾರ ಮುಂಜಾನೆ ಬಸ್‌ಗೆ ಟವೇರಾ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಸಹಾಯ ಹಸ್ತ ಚಾಚಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸತ್ತವರಲ್ಲಿ ಐವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಇದ್ದರು.

ಟವೇರಾ ಕಾರಿನಲ್ಲಿದ್ದವರೆಲ್ಲ ಮಹಾರಾಷ್ಟ್ರದ ಅಮರಾವತಿಯಿಂದ ತಮ್ಮ ಮನೆಗೆ ಹೋಗುತ್ತಿದ್ದರು. ಟವೇರಾ ಚಾಲಕ ಮಾರ್ಗಮಧ್ಯೆ ನಿದ್ದೆಗೆಟ್ಟು ಮುಂದೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಬೇತುಲ್ ಎಸ್ಪಿ ಶಿಮ್ಲಾ ಪ್ರಸಾದ್ ತಿಳಿಸಿದ್ದಾರೆ. ಅಪಘಾತದಲ್ಲಿ ಕಾರಿಗೆ ಭಾರೀ ಹಾನಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!