June 12, 2026
Friday, June 12, 2026
spot_img

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎಸ್‌ಯುವಿ-ಟ್ರ್ಯಾಕ್ಟರ್ ನಡುವೆ ಡಿಕ್ಕಿ, ಐವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಐವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮದುವೆ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದವರಿದ್ದ ಎಸ್‌ಯುವಿ ವಾಹನ, ಸೋಯಾಬೀನ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:

ತವಾ ನದಿ ಸೇತುವೆ ಸಮೀಪದ ಅಂಚಲ್ಖೇಡ ಬಳಿ ಬೆಳಗಿನ ಜಾವ ಈ ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ ಆಕ್ರಂದನ ಮುಗಿಲುಮುಟ್ಟಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.

ಪ್ರಾಥಮಿಕ ತನಿಖೆಯಲ್ಲಿ ಕಡಿಮೆ ಗೋಚರತೆ, ರಾತ್ರಿಯ ಸಮಯದ ಚಾಲನೆ ಅಥವಾ ಚಾಲಕನ ನಿರ್ಲಕ್ಷ್ಯ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ನಿಖರ ಕಾರಣಕ್ಕಾಗಿ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !