Wednesday, August 10, 2022

Latest Posts

ಮಧ್ಯಪ್ರದೇಶ ಬಾವಿ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದ ಬಾವಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೊಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಕಚೇರಿ, ಮೃತರ ಕುಟುಂಬಗಳಿಗೆ ಸಾಂತ್ವಾನ ತಿಳಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದೆ.
ಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ವೇಳೆ ಬಾವಿಯ ಮೇಲ್ಚಾವಣಿ ಕುಸಿದು ಗ್ರಾಮಸ್ಥರು ಬಾವಿಗೆ ಬಿದ್ದ ಪ್ರಕರಣ ಗುರುವಾರ ರಾತ್ರಿ ನಡೆದಿದ್ದು, ಈ ವೇಳೆ 11 ಮಂದಿಯ ಮೃತದೇಹ ಪತ್ತೆ ಮಾಡಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss