ಕಲುಷಿತ ನೀರು ಕುಡಿದು ಇಬ್ಬರು ಸಾವು, 30ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಲುಷಿತ ನೀರು ಕುಡಿದು ಇಬ್ಬರು ಸಾವನ್ನಪ್ಪಿದ್ದು, ಮೂವತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಚಂದಪುರದಲ್ಲಿ  ಗುರುವಾರ ನಡೆದಿದೆ. ಕಲುಷಿತ ನೀರಿನಿಂದ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಜಿಲ್ಲಾಡಳಿತ ತನಿಖೆಗೆ ಆದೇಶಿಸಲಾಗಿದೆ.

ಕೆಲವರು ಕಲುಷಿತ ನೀರು ಕುಡಿದು ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಗ್ರಾಮದಲ್ಲಿ ಆರೋಗ್ಯ ಇಲಾಖೆಯ ತಂಡವನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಭಾರಿ ಅನಿತಾ ಅಗರ್ವಾಲ್ ತಿಳಿಸಿದ್ದಾರೆ. ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!