Saturday, July 2, 2022

Latest Posts

ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ಜನ್ಮ ದಿನಾಚರಣೆ

ಹೊಸ ದಿಗಂತ ವರದಿ, ಮಡಿಕೇರಿ:

ಸ್ವತಂತ್ರ ಭಾರತದ ಮೊದಲ ಸೇನಾ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 123 ನೇ ಜನ್ಮ ದಿನವನ್ನು ಕೊಡಗು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸರಳವಾಗಿ ಆಚರಿಸಲಾಯಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಕಾರ್ಯಪ್ಪ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ರಾಜ್ಯಧ್ಯಕ್ಷ ರವಿ ಕುಶಾಲಪ್ಪ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮೇಜರ್ (ನಿವೃತ್ತ) ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಧಿಕಾರಿ ಕ್ಷಮಾ ಮಿಶ್ರಾ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕಾರ್ಯಪ್ಪ ಅವರ ಪುತ್ರ ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಮತ್ತಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss