ಹೊಸದಿಗಂತ ವರದಿ,ಮಡಿಕೇರಿ:
ಮಡಿಕೇರಿ -ಮಂಗಳೂರು ಹೆದ್ದಾರಿಯ ಮದೆನಾಡು ಸಮೀಪದ ಕರ್ತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಬೃಹತ್ ಮರ ಮತ್ತು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಯಿತು.