Saturday, July 2, 2022

Latest Posts

ಜ.15ರಿಂದ ಮಡಿಕೇರಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆರಂಭ

ದಿಗಂತ ವರದಿ ಮಡಿಕೇರಿ :

ವೆಸ್ಟರ್ನ್ ಹಾಗೂ ಬ್ಯಾರಿ ವಾರಿರ್ಯಸ್ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ‘ಮಡಿಕೇರಿ ಪ್ರೀಮಿಯರ್ ಲೀಗ್’ (ಎಂ.ಪಿ.ಎಲ್) ಕ್ರಿಕೆಟ್ ಪಂದ್ಯಾವಳಿ ಜ.15 ರಿಂದ 17ರ ವರೆಗೆ ನಡೆಯಲಿದೆ ಎಂದು ಕ್ಲಬ್’ನ ಅಧ್ಯಕ್ಷ ಕಬೀರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯವಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ 1 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದೆಂದರು.
ಜ.4 ರಂದು ಸಂಜೆ 7 ಗಂಟೆಗೆ ನಗರದ ಲೀ ಕೂರ್ಗ್ ಸಭಾಂಗಣದಲ್ಲಿ ಪಂದ್ಯಾವಳಿಯ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದ್ದು, 10 ತಂಡದ ಮಾಲಕರು ಸಜ್ಜಾಗಿದ್ದಾರೆ. ಈ ಬಾರಿ ಪಂದ್ಯಾವಳಿಯನ್ನು ಯ್ಯೂ ಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದೆಂದು ಕಬೀರ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ಕಾರ್ಯದರ್ಶಿ ಇದ್ರೀಸ್, ಖಜಾಂಚಿ ಸಂಮ್ನನ್ ಹಾಗೂ ಸದಸ್ಯ ಹನೀಫ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss