ಮಡಿಕೇರಿ- ಸಂಪಾಜೆ ಹೆದ್ದಾರಿಯ ವಾಹನ ಸಂಚಾರಕ್ಕೆ ಮುಕ್ತ

ಹೊಸದಿಗಂತ ವರದಿ,ಮಡಿಕೇರಿ:

ಮಡಿಕೇರಿ: ಮದೆನಾಡು ಬಳಿ ಭೂಕುಸಿತ ಉಂಟಾಗಿದ್ದ ಸ್ಥಳದಲ್ಲಿನ ಶೇ. 75 ರಷ್ಟು ಮಣ್ಣನ್ನು ತೆರವುಗೊಳಿಸಲಾಗಿದ್ದು, ಉಳಿದ ಮಣ್ಣಿನ ತೆರವು ಕಾರ್ಯಾಚರಣೆ ಮುಂದುವರಿಯಲಿದೆ.
ಪ್ರಸಕ್ತ ಯಾವುದೇ ಸಮಸ್ಯೆ ಕಂಡುಬಂದಿರುವುದಿಲ್ಲವಾದ್ದರಿಂದ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕೂಡಾ ಮಡಿಕೇರಿ – ಸಂಪಾಜೆ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ.
ಇದರಿಂದಾಗಿ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲೂ ರಾತ್ರಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!