ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ವಿಧಾನ ಸಭಾ ಚುನಾವಣೆಗೆ ಒಂದೆಡೆ ಪ್ರಚಾರ ನಡೆಯುತ್ತಿದ್ದರೆ, ಮತ್ತೊಂದೆಡೆ ದೇಶ, ವಿದೇಶಗಳಲ್ಲಿ ಭರ್ಜರಿ ಯಶಸ್ಸು ಕಂಡ ಸಿನಿಮಾ ‘ಧುರಂಧರ್: ದಿ ರಿವೆಂಜ್’ ಪ್ರದರ್ಶನಕ್ಕೆ ತಡೆ ನೀಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದು, ಇದರ ನಡುವೆ ಮದ್ರಾಸ್ ಹೈಕೋರ್ಟ್ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿ ಸಂಜಯ್ ಎ. ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ಪೀಠವು, ಚುನಾವಣಾ ಫಲಿತಾಂಶ ಪ್ರಕಟವಾಗುವವರೆಗೆ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿದಾರರ ಮಧುರೈ ನಿವಾಸಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭ ರಾಜಕೀಯ ಪ್ರೇರಿತ ಚಿತ್ರಗಳ ಪ್ರದರ್ಶನವು ಮತದಾರರ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಹೈಕೋರ್ಟ್, ಅರ್ಜಿಯಲ್ಲಿ ಯಾವುದೇ ರೀತಿಯ ಚಿತ್ರದ ಪ್ರದರ್ಶನ ನಿಲ್ಲಿಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಯಥಾವತ್ತಾಗಿ ತಮಿಳುನಾಡಿನಲ್ಲಿ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮುಂದುವರಿಸಲಿದೆ ಎಂದು ತಿಳಿಸಿದೆ.



