ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಅಕ್ರಮ ಮದ್ಯ ದುರಂತ ಪ್ರಕರಣವನ್ನು ಕೇಂದ್ರ ತನಿಖಾ ದಳದ (CBI) ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
ಡಿಎಂಕೆ (DMK) ಸರ್ಕಾರ ಈ ಪ್ರಕರಣವನ್ನು ಈಗಾಗಲೇ ಸಿಐಡಿಯ ಕ್ರೈಂ ಬ್ರಾಂಚ್ ವಿಭಾಗಕ್ಕೆ ವರ್ಗಾಯಿಸಿತ್ತು. ಇನ್ನೂ ಸಿಬಿಐ ತನಿಖೆಗೆ ಈ ಪ್ರಕರಣದ ವರ್ಗಾವಣೆಯನ್ನು ವಿರೋಧಿಸಿತ್ತು. ಈ ಸಂಬಂಧ ಐಎಡಿಎಂಕೆ, ಪಿಎಂಕೆ ಮತ್ತು ಬಿಜೆಪಿ ನ್ಯಾಯಾಲಯದ ಮೊರೆ ಹೋಗಿದ್ದವು. ಇದೀಗ ಆಡಳಿತಾರೂಢ ಡಿಎಂಕೆಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.
ಈ ದುರಂತದಲ್ಲಿ 68 ಜನರ ಸಾವನ್ನಪ್ಪಿದ್ದರು.24 ಜನರನ್ನು ಬಂಧಿಸಲಾಗಿದೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಎಸ್ಪಿಯನ್ನು ಅಮಾನತು ಮಾಡಲಾಗಿದೆ. ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ನ್ಯಾಯಾಲಯದಲ್ಲಿ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದರು.
ಅರ್ಜಿದಾರರ ಪರ ವಕೀಲರು, ಈ ಹಿಂದೆ ಇದೇ ರೀತಿಯ ದುರಂತದಿಂದ ಸರ್ಕಾರವು ಯಾವುದೇ ಪಾಠವನ್ನು ಕಲಿತಿಲ್ಲ. ಪಕ್ಕದ ರಾಜ್ಯಗಳಿಂದ ಮೆಥೆನಾಲ್ ಬರುತ್ತಿದೆ. ಇದರಿಂದ ಪ್ರಕರಣವನ್ನು ಸಿಬಿಐಗೆ ನಿಭಾಯಿಸಲು ಸುಲಭವಾಗಲಿದೆ ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸಿಬಿಐ ತನಿಖೆಗೆ ಸಮ್ಮತಿಸಿದೆ.