ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಮದರಸಾ ಶಿಕ್ಷಕನಿಗೆ 187 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

 ಹೊಸದಿಗಂತ ಡಿಜಿಟಲ್ ಡೆಸ್ಕ್:

16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕೇರಳದ ಕಣ್ಣೂರಿನ ಮದರಸಾ ಶಿಕ್ಷಕನೊಬ್ಬನಿಗೆ ತಲಿಪರಂಬ ಪೋಕ್ಸೋ ನ್ಯಾಯಾಲಯ ಬರೋಬ್ಬರಿ 187 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲ ಶೆರಿಮೋಲ್ ಜೋಸ್ ಅವರ ಪ್ರಕಾರ, ಅಳಕೋಡ್ ಮೂಲದ ಮೊಹಮ್ಮದ್ ರಫಿ ಈ ಪೋಕ್ಸೋ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ನ್ಯಾಯಾಲಯವು 9 ಲಕ್ಷ ರೂ. ದಂಡವನ್ನೂ ವಿಧಿಸಿದೆ.

ಆರೋಪಿಯು ಈ ಹಿಂದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬುದನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ ಎಂದು ವಕೀಲ ಜೋಸ್ ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!