ರಾಜಸ್ತಾನದ ಬಿಕನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನದ ಬಿಕಾನೆರ್‌ನಲ್ಲಿ ಭಾನುವಾರ ನಸುಕಿನ ವೇಳೆಯಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ದಾಖಲಾಗಿದೆ.

ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ (NCS), ಭೂಕಂಪವು ಬೆಳಗಿನ ಜಾವ 2.16 ಕ್ಕೆ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 8 ಕಿಮೀ ಆಳದಲ್ಲಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!