ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳ-ಟಿಬೆಟ್ ಗಡಿಯಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ಭೂಕಂಪ ಸಂಭವಿಸಿದೆ. ಭೂಕಂಪವು ಟಿಬೆಟ್ನಲ್ಲಿ ಸಂಭವಿಸಿದೆ, ಆದರೆ ಚೀನಾ, ನೇಪಾಳ ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿಯೂ ಸಹ ಕಂಪನದ ಅನುಭವವಾಗಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ. ಟಿಬೆಟ್ನ ಕ್ಸಿಜಾಂಗ್ ಕೇಂದ್ರಬಿಂದುವಾಗಿದೆ.
32 ಮಂದಿ ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಚೀನಾದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.