ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಜೀವಕ್ಕೆ ಅಪಾಯವಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಆತ್ಮಾಹುತಿ ಸ್ಫೋಟ ಮಾಡಿ ಮುಖ್ಯಮಂತ್ರಿ ಹತ್ಯೆಗೆ ಸಂಚು ನಡೆದಿದೆ.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಭದ್ರತೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವರ್ಷಾ ಹಾಗೂ ಥಾಣೆಯಲ್ಲಿ ಶಿಂಧೆ ಅವರ ನಿವಾಸಕ್ಕೂ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಸುಮಾರು ಒಂದು ತಿಂಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಕೊಲೆ ಬೆದರಿಕೆ ಪತ್ರವೊಂದು ಸಚಿವಾಲಯಕ್ಕೆ ಬಂದಿತ್ತು. ಈ ಬೆದರಿಕೆ ಪತ್ರವನ್ನು ಸ್ವೀಕರಿಸಿದ ನಂತರ, ಫೋನ್ ಕರೆ ಕೂಡ ಬಂದಿತ್ತು.
ಈ ಹಿಂದೆ ಸಚಿವರಾಗಿದ್ದಾಗಲೂ ಏಕನಾಥ್ ಶಿಂಧೆ ಅವರನ್ನು ಹತ್ಯೆ ಮಾಡುವುದಾಗಿ ಮಾವೋವಾದಿಗಳು ಬೆದರಿಕೆ ಹಾಕಿದ್ದರು.